Home Uncategorized ಆಟವಾಡುತ್ತಾ ರಸ್ತೆಗೆ ಬಂದ ಮಗು ಕಾರು ಡಿಕ್ಕಿಯಾಗಿ ಸಾವು

ಆಟವಾಡುತ್ತಾ ರಸ್ತೆಗೆ ಬಂದ ಮಗು ಕಾರು ಡಿಕ್ಕಿಯಾಗಿ ಸಾವು

by Mahesh malenaadu

ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆ ಬಳಿ ಮಗುವೊಂದು ಸಾವನ್ನಪ್ಪಿರುವ ಘಟನೆ ಭಾನುವಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ.

ತಿರ್ಥಹಳ್ಳಿ ತಾಲೂಕಿನ ತ್ರಿಯಂಬಕಪುರ ಗ್ರಾ.ಪಂ. ವ್ಯಾಪ್ತಿಯ ಗುಡ್ಡೆಪಾಲ್ ಸಮೀಪದ ಗುಂಡುಗದ್ದೆಯ ಪ್ರಗತ್ ಎಂಬುವರ ಮಗು ಸಾವನಪ್ಪಿರುವ ದುರ್ದೈವಿ.

ಮನೆಯ ಮುಂದೆ ಆಟವಾಡುತ್ತಿದ್ದ 6 ವರ್ಷದ ದೃಶ್ಯ ಅಪಘಾತದಲ್ಲಿ ಮೃತಪಟ್ಟಿರುವ ಮಗು ವಾಗಿದ್ದು, ಮನೆಯ ಪಕ್ಕದಲ್ಲಿಯೇ ಲಾರಿಯೊಂದು ನಿಂತಿದ್ದು ಮಗುವನ್ನ ಕಾಣದೆ ರಸ್ತೆಯಲ್ಲಿ ಬರುತ್ತಿದ್ದ ಕಾರು ದೃಶ್ಯನಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಬಸಕ್ಕೆ ಮಗುವಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆ ತಂದರೂ ಸಹ ಅಷ್ಟರಲ್ಲೇ ಮಗು ಸಾವನ್ನಪ್ಪಿದೆ.

ಮಗು ಸಾವನ್ನಪ್ಪುತ್ತಿದ್ದಂತೆ ಪೋಷಕರು ಹಾಗೂ ಕುಟುಂಬಸ್ತ ಆಕ್ರಂದನ ಮುಗಿಲು ಮುಟ್ಟಿದೆ, ಸ್ಥಳಕ್ಕೆ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರು ತಿರ್ಥಹಳ್ಳಿ ಮುಖಂಡರಾದ ಅರ್ ಎಂ ಮಂಜುನಾಥ್ ಗೌಡ ಬೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

Spread the love

You may also like

Leave a Comment