ಸೋನಂ ವಾಂಗ್ಚುಕ್ ವಿರುದ್ಧ ಕೈಗೊಂಡ ಕ್ರಮವನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಹಶಿಲ್ದಾರ್ ಮೂಲಕಮನವಿ ಸಲ್ಲಿಸಿದ ಶಿಕಾರಿಪುರದ ಕಾಂಗ್ರೆಸ್ ಮುಡರು.
ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಲಾಠಿ ಚಾರ್ಜ್ ನಡೆಸಲಾಗಿದೆ ರಕ್ತ ಹರಿಯುವಂತೆ ಹಲ್ಲೆ ನಡೆಸಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ.
ಭಾರತದ ಸಂವಿಧಾನ ನೀಡಿರುವ ಶಾಂತಿಯುತ ಪ್ರತಿಭಟನೆ ಹಕ್ಕಿನ ಮೇಲಿನ ನೇರ ದಾಳಿಯಾಗಿದೆ.
ಸಮಾಜ ಸೇವಕರಾದ ಸೋನಂ ವಾಂಗ್ಲುಕ್ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಗೌರವಿಸಿಲ್ಲ, ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ಎಳೆದುಕೊಂಡು ಹೋಗಿದ್ದಾರೆ, ಇದು ದೇಶದ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ಉಂಟುಮಾಡಿದೆ.
ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಬಲಪ್ರಯೋಗದ ಕುರಿತು ಸುಪ್ರೀಂ ಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಬೇಕು, ಪ್ರತಿಭಟನಾಕಾರರ ಮೇಲೆ ಅನಗತ್ಯ ಬಲಪ್ರಯೋಗ ನಡೆಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು,
ಸಮಾಜಸೇವಕರಾದ ಸೋನಂ ವಾಂಗ್ಲುಕ್ ವಿರುದ್ಧ ಕೈಗೊಂಡ ಕ್ರಮವನ್ನು ಹಿಂಪಡೆಯಬೇಕು, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದುಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು.
ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿ ಆಗ್ರಹಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು.

