Home Uncategorized 8ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅವಧಿ ವಿಸ್ತರಣೆ : ಪ್ರಭುಲಿಂಗ ಕವಳಿಕಟ್ಟಿ

8ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅವಧಿ ವಿಸ್ತರಣೆ : ಪ್ರಭುಲಿಂಗ ಕವಳಿಕಟ್ಟಿ

by Mahesh malenaadu

ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿದ್ದು, ಅರ್ಹ ಮತದಾರರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಆ. 8ರ ಕೊನೆಯ ದಿನದವರೆಗೂ ಬಿಎಲ್‌ಓ ಮನೆ ಮನೆ ಭೇಟಿಗೆ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಆ. 17ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ನಂತರ ಸೆ. 16 ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಧಿ ಇರುತ್ತದೆ. ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಅ. 15 ರೊಳಗಾಗಿ ವಿಲೇವಾರಿ ಮಾಡಲಾಗುವುದು. ಅ. 19ರಂದು ಮತದಾರರ ಪಟ್ಟಿಯ ಅಂತಿಮ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 15,19,459 ಅರ್ಹ ಮತದಾರರಿದ್ದು, ಈ ಪೈಕಿ 12,93,844 ಮತದಾರರನ್ನು ಡಿಜಿಟಲೀಕರಿಸಿ ಶೇ. 85.15ರಷ್ಟು ಪ್ರಗತಿ ಸಾಧಿಸಲಾಗಿದೆ. ಇವರಲ್ಲಿ 6196 ಮತದಾರರು ಆನ್‌ಲೈನ್‌ ಮೂಲಕ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಭಾಗವಹಿಸಿದ್ದಾರೆ. ಇನ್ನೂ 69603 ಮಂದಿ ಮತದಾರರು ನೋಂದಣಿ ಕಾರ್ಯದಲ್ಲಿ ಭಾಗವಹಿಸಿರುವುದರಿಂದ ಹಿಂದುಳಿದಿದ್ದಾರೆ. ಅವರನ್ನು ಸದರಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿತರಾದ 1793 ಮತಗಟ್ಟೆ ಅಧಿಕಾರಿಗಳು ಮತದಾರರ ಮನೆಮನೆಗೆ ತೆರಳಿ ಅವರಿಂದ ಮಾಹಿತಿ ಪಡೆದು ಅಪ್‌ಲೋಡ್‌ ಮಾಡಲಿದ್ದಾರೆ ಎಂದು ತಿಳಿಸಿದರು.

Spread the love

You may also like

Leave a Comment