60
ಶಿವಮೊಗ್ಗ: ಗುರುಪೂರ್ಣಿಮೆ ಮಹೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರ ಕ್ಷೇತ್ರದ ಶಾಸಕರಾದ ಬಿ.ವೈ. ವಿಜಯೇಂದ್ರ ಅವರು ಶಿವಮೊಗ್ಗದ ಐತಿಹಾಸಿಕ ಬೆಕ್ಕಿನ ಕಲ್ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಮಠಕ್ಕೆ ಆಗಮಿಸಿದ ವಿಜಯೇಂದ್ರ ಅವರು, ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ ಚರಣಗಳಿಗೆ ನಮಸ್ಕರಿಸಿ ಗುರುಪೂರ್ಣಿಮೆಯ ವಿಶೇಷ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಿ.ವೈ. ವಿಜಯೇಂದ್ರ ಅವರೊಂದಿಗೆ ಉಪಸ್ಥಿತರಿದ್ದು, ಶ್ರೀಗಳ ದರ್ಶನ ಪಡೆದರು. ಮಠಕ್ಕೆ ಭೇಟಿ ನೀಡಿದ ವೇಳೆ ಶ್ರೀಗಳು ಬಿ.ಯಿ.ವಿ. ಅವರಿಗೆ ಆಶೀರ್ವಚನ ನೀಡಿ ಶುಭ ಹಾರೈಸಿದರು.

