Home ರಾಷ್ಟ್ರೀಯ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಈಗ ಮುಗಿದ ಅಧ್ಯಾಯ : ಕೆ.ಎಸ್. ಈಶ್ವರಪ್ಪ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಈಗ ಮುಗಿದ ಅಧ್ಯಾಯ : ಕೆ.ಎಸ್. ಈಶ್ವರಪ್ಪ

by Mahesh malenaadu

ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪಿನ ಅನ್ವಯ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಅನುಷ್ಠಾನದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಅದು ಮುಗಿದ ಅಧ್ಯಾಯ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಪರಿಸರ ಸಂರಕ್ಷಣೆಗಾಗಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿ, ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಅಲ್ಲಿ ಯಾವುದೇ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ನಾಶವಾಗುವಂತಹ ಯೋಜನೆಗಳಿಗೆ ಅನುಮತಿ ನೀಡಕೂಡದು ಎಂದು ಜು. 29ರಂದು ಆದೇಶ ನೀಡಿದೆ. ಇದೊಂದು ಐತಿಹಾಸಿಕ ತೀರ್ಪು ಆಗಿದ್ದು, ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಪಂಪ್ಡ್ ಸ್ಟೋರೇಜ್ ಯೋಜನೆಯೂ ಸೇರಿದಂತೆ ಬೇಸೂರಿನ ಅಣುವಿದ್ಯುತ್ ಯೋಜನೆಯೂ ಕೂಡ ಜಾರಿಯಾಗುವುದಿಲ್ಲ. ಒಂದು ಪಕ್ಷ ಇದನ್ನೂ ಮೀರಿ ರಾಜ್ಯ ಸರ್ಕಾರ ಈ ಯೋಜನೆಗಳನ್ನು ಅನುಷ್ಠಾನ ಮಾಡಲು ಹೊರಟರೆ ಕೋರ್ಟ್ ನಿಂದನೆಯ ಕೇಸನ್ನು ದಾಖಲಿಸಬೇಕಾಗುತ್ತದೆ. ಈಗಾಗಲೇ ಇದಕ್ಕೆ ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Spread the love

You may also like

Leave a Comment