Home Uncategorized ಮರಕ್ಕೆ ಕಾರು ಡಿಕ್ಕಿಯಾಗಿ ಯುವಕ ಸಾವು, ಮೂರು ತುಂಡಾದ ಕಾರು

ಮರಕ್ಕೆ ಕಾರು ಡಿಕ್ಕಿಯಾಗಿ ಯುವಕ ಸಾವು, ಮೂರು ತುಂಡಾದ ಕಾರು

by Mahesh malenaadu

​ಶಿವಮೊಗ್ಗ : ನಗರದ ಹರಿಗೆ ಬಳಿ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಸೀದಾ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಗುರುರಾಜ್ (21) ಎಂಬ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

​ರಾತ್ರಿ ಸುಮಾರು 3 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ. ಅತಿಯಾದ ವೇಗವೇ ಈ ದುರಂತಕ್ಕೆ ಮುಖ್ಯ ಕಾರಣ ಎಂದು ಶಂಕಿಸಲಾಗಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಕಾರು ಮೂರು ಭಾಗವಾಗಿ ಸಂಪೂರ್ಣವಾಗಿ ಛಿದ್ರ ಛಿದ್ರಗೊಂಡು ನಜ್ಜುಗುಜ್ಜಾಗಿದೆ.
​ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Spread the love

You may also like

Leave a Comment