41
ಶಿವಮೊಗ್ಗ : ನಗರದ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ನಿರುಪಯುಕ್ತವಾಗಿ ನಿಲ್ಲಿಸಲಾಗಿದ್ದ ವಾಹನಗಳ ವಿರುದ್ಧ ಶಿವಮೊಗ್ಗ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನೋಟಿಸ್ ಅಂಟಿಸಿ ಎಚ್ಚರಿಕೆ ನೀಡಿದ್ದ ವಾಹನಗಳನ್ನು ಇದೀಗ ಪೊಲೀಸರು ವಶಕ್ಕೆ ಪಡೆದು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದಾರೆ.
ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 82 ನಿರುಪಯುಕ್ತ ವಾಹನಗಳನ್ನು ಗುರುತಿಸಲಾಗಿದ್ದು, ಮೊದಲ ಹಂತದಲ್ಲಿ 59 ವಾಹನಗಳಿಗೆ ನೋಟಿಸ್ ಅಂಟಿಸಲಾಗಿತ್ತು. ಬಳಿಕ ವಾಹನ ಮಾಲೀಕರಿಗೆ ಅವಕಾಶ ನೀಡಿದ ನಂತರವೂ ತೆರವುಗೊಳಿಸದ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಇದುವರೆಗೆ 68 ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವುಗಳನ್ನು ರವೀಂದ್ರನಗರ, ಗುಂಡಪ್ಪಶೆಟ್ಟಿಹಳ್ಳಿ, ಲಕ್ಷ್ಮೀ ಚಿತ್ರಮಂದಿರ ಸೇರಿದಂತೆ ನಗರದ ವಿವಿಧ ಪ್ರದೇಶಗಳಿಂದ ತೆರವುಗೊಳಿಸಲಾಗಿದೆ.

