ಶಿವಮೊಗ್ಗ: ವಿವಿ ಅಧಿಕಾರಿಗಳನ್ನು ಒಳಗೆ ಬಿಡದೇ ಗೇಟ್ ಬಂದ್ ಮಾಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಶಿವಮೊಗ್ಗದ ನವುಲೆ ಬಡಾವಣೆಯಲ್ಲಿರುವ ಕೃಷಿ ವಿವಿ ಆವರಣದಲ್ಲಿ ನಡೆದಿದೆ.
ನವುಲೆಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಿಯಮ ಭಾಹಿರವಾಗಿ ನಡೆಸುತ್ತಿರುವ ನೇಮಕಾತಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನಡೆಸಲಾಯಿತು.
ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ನೇಮಕಾತಿಯು ಅತ್ಯಂತ ತಾಂತ್ರಿಕ ಸ್ವರೂಪದ್ದಾಗಿದೆ ಇದೀಗ ಜಾರಿಯಲ್ಲಿರುವ ನಿಯಮಗಳ ಉಲ್ಲಂಘನೆ ಆರೋಪ ಕೇಳಿಬಂದಿದ್ದು ಹಾಗೂ ಅನ್ಯ ಪದವೀಧರರಿಗೆ ಅವಕಾಶ ಕಲ್ಪಿಸಿರುವುದಕ್ಕೆ ವಿರೋಧಿಸಿ
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ವಿಧ್ಯಾರ್ಥಿಗಳು.
ರೈತರಿಗೆ ವೈಜ್ಞಾನಿಕ ಕೃಷಿ ಸಲಹೆ, ಬೆಳೆ ನಿರ್ವಹಣೆ, ಮಣ್ಣಿನ ಆರೋಗ್ಯ ಕಾಪಾಡುವುದು, ಕೀಟ ಹಾಗೂ ರೋಗ ನಿಯಂತ್ರಣ, ರಸಗೊಬ್ಬರ ಮತ್ತು ಬೀಜಗಳ, ಗುಣಮಟ್ಟದ ಮೇಲ್ವಿಚಾರಣೆ ಸೇರಿದಂತೆ ಮಹತ್ವದ ಜವಾಬ್ದಾರಿಗಳನ್ನು ಹೊಂದಿವೆ.
ಐಸಿಎಆರ್ ಮಾನ್ಯತೆ ಪಡೆದ ಕೃಷಿ ಹಾಗೂ ಕೃಷಿ ಸಂಬಂಧಿತ ಪದವೀಧರರಿಗೆ ಮಾತ್ರ ಈ ಹುದ್ದೆಗಳಲ್ಲಿ ಅವಕಾಶ ನೀಡಬೇಕು
ಈ ಬಗ್ಗೆ ಹಲವು ಬಾರಿ ಸರ್ಕಾರ ಹಾಗೂ ಸಂಬಂಧಿತ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಯಾವೂದೆ ಉಪಯೋಗವಾಗಿಲ್ಲ.
ಹೀಗಾಗಿ ರಾಜ್ಯ ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ತಕ್ಷಣ ಮಧ್ಯಪ್ರವೇಶಿಸಬೇಕು, ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಮೂಲಕ ಕೃಷಿ ವಿದ್ಯಾರ್ಥಿಗಳು ಹಾಗೂ ರೈತ ಸಮುದಾಯದಲ್ಲಿರುವ ಆತಂಕವನ್ನು ನಿವಾರಿಸಬೇಕೆಂದು ಒತ್ತಾಯಿಸಿದರು.

