Home Uncategorized ಬರ ಪರಿಸ್ಥಿತಿ ಕುರಿತು ಸಚಿವ ಮಧು ಬಂಗಾರಪ್ಪ ತುರ್ತು ಸಭೆ; ಅಧಿಕಾರಿಗಳಿಗೆ ಖಡಕ್ ಸೂಚನೆ

ಬರ ಪರಿಸ್ಥಿತಿ ಕುರಿತು ಸಚಿವ ಮಧು ಬಂಗಾರಪ್ಪ ತುರ್ತು ಸಭೆ; ಅಧಿಕಾರಿಗಳಿಗೆ ಖಡಕ್ ಸೂಚನೆ

by Mahesh malenaadu

​ಶಿವಮೊಗ್ಗ : ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಜಿಲ್ಲಾಡಳಿತ ಸಜ್ಜಾಗಬೇಕಿದೆ ಎಂದು ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಉನ್ನತ ಮಟ್ಟದ ಸಭೆ ನಡೆಯಿತು‌.
​ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಬರ ಪರಿಸ್ಥಿತಿ, ಬೆಳೆ ಹಾನಿ ಹಾಗೂ ಕುಡಿಯುವ ನೀರಿನ ಅಭಾವದ ಕುರಿತು ಅಧಿಕಾರಿಗಳಿಂದ ಸಚಿವರು ವಿವರವಾದ ಮಾಹಿತಿ ಪಡೆದುಕೊಂಡರು. ಜಿಲ್ಲೆಯಾದ್ಯಂತ ಉಂಟಾಗಿರುವ ಬೆಳೆ ಹಾನಿ ಹಾಗೂ ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಗತಿಯ ಬಗ್ಗೆ ಅಧಿಕಾರಿಗಳಿಂದ ಸಚಿವರು ಸಮಗ್ರ ಮಾಹಿತಿ ಕಲೆಹಾಕಿದರು. ಪ್ರತಿಯೊಂದು ತಾಲೂಕಿನಲ್ಲೂ ಕುಡಿಯುವ ನೀರಿನ ಅಭಾವ ತಲೆದೋರದಂತೆ ಹಾಗೂ ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತೀವ್ರ ಚರ್ಚೆ ನಡೆಯಿತು.
ಜಿಲ್ಲೆಯ ಯಾವುದೇ ಹಳ್ಳಿಯಲ್ಲೂ ಕುಡಿಯುವ ನೀರಿಗೆ ತೊಂದರೆಯಾಗಬಾರದು. ನೀರು ಮತ್ತು ಮೇವಿನ ಸಮಸ್ಯೆಗೆ ತಕ್ಷಣವೇ ಪರ್ಯಾಯ ವ್ಯವಸ್ಥೆ ಮಾಡಬೇಕು” ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಗಡುಸಾದ ಸೂಚನೆ ನೀಡಿದರು. ಸಂಕಷ್ಟದಲ್ಲಿರುವ ರೈತರ ಕರೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸುವ ಕೆಲಸವಾಗಬೇಕು ಎಂದು ನಿರ್ದೇಶನ ನೀಡಿದರು.
​ಈ ಮಹತ್ವದ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.

Spread the love

You may also like

Leave a Comment