Home Uncategorized ಸಮಾಜ ಸೇವೆ ಮಾಡುವ ಆಸಕ್ತಿಯಿದೆಯೆ, ಆನ್ ಲೈನ್ ಪೋರ್ಟಲ್ ಮೂಲಕ ಅರ್ಜಿ ಹಾಕಿ.

ಸಮಾಜ ಸೇವೆ ಮಾಡುವ ಆಸಕ್ತಿಯಿದೆಯೆ, ಆನ್ ಲೈನ್ ಪೋರ್ಟಲ್ ಮೂಲಕ ಅರ್ಜಿ ಹಾಕಿ.

by Mahesh malenaadu

ಶಿವಮೊಗ್ಗ, ಆ.12: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಯುವಜನರನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲಾಗುತ್ತಿದ್ದು, ಆಸಕ್ತ ಯುವಕ-ಯುವತಿಯರು ಆನ್‌ಲೈನ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಇದರ ಭಾಗವಾಗಿ ಬಿಜೆವೈಎಸ್ ಆನ್‌ಲೈನ್ ಪೋರ್ಟಲ್ ಮೂಲಕ ಸಂಘಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರತಿ ವಾರ್ಡ್‌ನಲ್ಲಿ ಯುವ ಸಂಘ
ಶಿವಮೊಗ್ಗ ಮಹಾನಗರ ಪಾಲಿಕೆಯ ಎಲ್ಲಾ ವಾರ್ಡ್‌ಗಳಲ್ಲಿ ತಲಾ ಒಂದು ‘ಭಾರತ್ ಜೋಡೋ ಯುವ ಸಂಘ’ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್ ಸಂಖ್ಯೆ 1, 16, 17 ಮತ್ತು 23ರಲ್ಲಿ ತಲಾ ಎರಡು ಸಂಘಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

ಯುವ ಸಂಘಗಳು ಕ್ರೀಡೆ ಮತ್ತು ಫಿಟ್‌ನೆಸ್, ಯುವ ಸಬಲೀಕರಣ, ಕೌಶಲ್ಯಾಭಿವೃದ್ಧಿ, ಸಮುದಾಯ ಅಭಿವೃದ್ಧಿ, ಅರಣ್ಯ ಮತ್ತು ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಯೋಗಕ್ಷೇಮ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವಾ ಚಟುವಟಿಕೆಗಳನ್ನು ಕೈಗೊಳ್ಳಲಿವೆ.

16ರಿಂದ 35 ವರ್ಷದ ಯುವಕರಿಗೆ ಅವಕಾಶ
ಸಾಮಾಜಿಕ ಸೇವೆಯಲ್ಲಿ ಆಸಕ್ತಿ ಹೊಂದಿರುವ 16ರಿಂದ 35 ವರ್ಷದೊಳಗಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಯುವಕ-ಯುವತಿಯರು ಸದಸ್ಯತ್ವ ಪಡೆಯಬಹುದಾಗಿದೆ. ಸದಸ್ಯರು ತಾವು ಸೇರ್ಪಡೆಗೊಳ್ಳುವ ಆಯಾ ಪ್ರದೇಶದಲ್ಲಿ ಕನಿಷ್ಠ 6 ತಿಂಗಳಿನಿಂದ ವಾಸವಿರಬೇಕು ಹಾಗೂ ಸಾಮಾಜಿಕ ಸೇವೆಯಲ್ಲಿ ಆಸಕ್ತಿ ಹೊಂದಿರಬೇಕು ಎಂದು ತಿಳಿಸಲಾಗಿದೆ.

ಆಸಕ್ತ ಯುವಕ-ಯುವತಿಯರು www.bjys.karnataka.gov.in ಆನ್‌ಲೈನ್ ಪೋರ್ಟಲ್‌ಗೆ ಭೇಟಿ ನೀಡಿ ಭಾರತ್ ಜೋಡೋ ಯುವ ಸಂಘದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಮನವಿ ಮಾಡಿದ್ದಾರೆ.

Spread the love

You may also like

Leave a Comment