22
ಶಿವಮೊಗ್ಗ: ಮಳೆಹಾನಿಗೊಳಗಾದ ಸಾಗರ ನಗರದ ವಿವಿಧ ಪ್ರದೇಶಗಳಲ್ಲಿ ಶಾಸಕರಾದ ಬೇಳೂರು ಗೋಪಾಲ ಕೃಷ್ಣ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭ ಮನೆ ಕಳೆದುಕೊಂಡ ಬಡ ಕುಟುಂಬಗಳಿಗೆ ಸರ್ಕಾರದ ಪರಿಹಾರ ಚೆಕ್ ವಿತರಣೆ ಮಾಡಿದರು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕಡಿಮೆ ಹಾನಿಯಾಗಿದೆ ಎಂದು ಮನೆ ಕುಸಿದು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಾಂತ್ವನ ಹೇಳಿದ ರು, ತಾಲೂಕು ಆಡಳಿತದ ಮೂಲಕ ತಕ್ಷಣದ ಸ್ಪಂದನೆ ನೀಡಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಂಪೂರ್ಣ ಮನೆ ಹಾನಿಗೆ ₹1 ಲಕ್ಷ ಹಾಗೂ ಭಾಗಶಃ ಹಾನಿಗೆ ಅಂದಾಜು ಮೊತ್ತದ ಪರಿಹಾರ ನೀಡಲಾಗುವುದು, ಅಲ್ಲದೆ ಸಂತ್ರಸ್ತರಿಗೆ ವೈಯಕ್ತಿಕವಾಗಿಯೂ ಕೂಡ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ
ಹಬ್ಬದ ಸಂದರ್ಭದಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

