Home ಅಪರಾಧ 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ: ಕಾರ್ಗಲ್‌ ಪೊಲೀಸರ ಕಾರ್ಯಾಚರಣೆ

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ: ಕಾರ್ಗಲ್‌ ಪೊಲೀಸರ ಕಾರ್ಯಾಚರಣೆ

by Mahesh malenaadu

ಶಿವಮೊಗ್ಗ : ಕಳೆದ 18 ವರ್ಷಗಳಿಂದ ಪೊಲೀಸ್‌ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಕಾರ್ಗಲ್ ಪೊಲೀಸ್ ಠಾಣೆಯ ಪ್ರೋಸೆಸ್ ಸಿಬ್ಬಂದಿ ಯಶಸ್ವಿಯಾಗಿ ಬಂಧಿಸಿದ್ದಾರೆ.

​ಗದಗ ಮೂಲದ ಇಮ್ರಾನ್ ಬಂಧಿತ ಆರೋಪಿ. ಈತನ ವಿರುದ್ಧ 2007ರಲ್ಲಿ ಜೋಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 379ರ (ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದಂದಿನಿಂದ ಆರೋಪಿಯು ನ್ಯಾಯಾಲಯ ಹಾಗೂ ಪೊಲೀಸರಿಗೆ ಚೋರ ಕೈಕೊಟ್ಟು ತಲೆಮರೆಸಿಕೊಂಡಿದ್ದನು.
​ಈ ಹಿನ್ನೆಲೆಯಲ್ಲಿ ಸಾಗರದ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯವು ಈ ಪ್ರಕರಣವನ್ನು ‘ಎಲ್‌ಪಿಆರ್’ ಎಂದು ಘೋಷಿಸಿ, ಆರೋಪಿಯ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿತ್ತು. ಪ್ರಸ್ತುತ ಕಾರ್ಯಪ್ರವೃತ್ತರಾದ ಕಾರ್ಗಲ್ ಪೊಲೀಸ್ ಠಾಣೆಯ ಸಿಬ್ಬಂದಿ, ಸುಳಿವು ಆಧರಿಸಿ ಆರೋಪಿಯನ್ನು ಬಂಧಿಸಿ ಘನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

Spread the love

You may also like

Leave a Comment