27
ಶಿವಮೊಗ್ಗ : ಕಳೆದ 7 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಯನ್ನು ಕೊನೆಗೂ ಬಂಧಿಸಲಾಗಿದೆ.
ಬಂಧಿತ ರೌಡಿಯನ್ನು ಇಬ್ರಾಹಿಂ ಎಂದು ಗುರುತಿಸಲಾಗಿದೆ. ಈತ ಕಳೆದ ಏಳು ವರ್ಷಗಳಿಂದ ತನ್ನ ವಿಳಾಸ ಹಾಗೂ ಚಲನವಲನಗಳ ಸುಳಿವು ಸಿಗದಂತೆ ತಲೆಮರೆಸಿಕೊಂಡಿದ್ದನು. ಶಿಕಾರಿಪುರ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಶರತ್ ಅವರ ನೇತೃತ್ವದ ಸಿಬ್ಬಂದಿ ತಂಡವು ಕಾರ್ಯಾಚರಣೆ ನಡೆಸಿ, ಈ ರೌಡಿ ಆಸಾಮಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ.
ಆರೋಪಿಯ ಬಂಧನದ ಬಳಿಕ, ಸಾರ್ವಜನಿಕ ಶಾಂತಿ ಮತ್ತು ಮುಂಜಾಗ್ರತಾ ಕ್ರಮವಾಗಿ ಆತನ ವಿರುದ್ಧ ಪಿಎಆರ್ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

