102
ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ರೈತ ಸಂಘ ಆಕ್ರೋಶವನ್ನು ಹೊರಹಾಕಿದೆ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನೆಹಮ್ಮಿಕೊಳ್ಳಲಾಗಿತ್ತು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ರೈತ ಸಂಘಟನೆ ರಾಜ್ಯಾ ಸರ್ಕಾರದ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿತ್ತು.
ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು, ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥವಾಗಿ ವಾದ ಮಂಡಿಸಿ ನಮ್ಮ ಹಕ್ಕು ಪಡೆಯುವಂತೆ ರೈತ ಸಂಘ ಒತ್ತಾಯಿಸಿದೆ.

