ಶಿವಮೊಗ್ಗ: ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಪಡೆದುಕೊಂಡ ನಂತರವಷ್ಟೇ ಈ ಬಗ್ಗೆ ಮಾತನಾಡುತ್ತೇನೆ ಎಂದು ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಪೂರ್ಣ ವಿವರಗಳನ್ನು ಅಧಿಕಾರಿಗಳಿಂದ ಪಡೆಯುತ್ತಿದ್ದೇನೆ. ಮಾಹಿತಿ ಸಿಕ್ಕ ಬಳಿಕ ಸ್ಪಷ್ಟವಾಗಿ ಪ್ರತಿಕ್ರಿಯಿಸುತ್ತೇನೆ,” ಎಂದರು.
ಇದೇ ವೇಳೆ ಅರಣ್ಯ ಕಾನೂನು ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, “ಅರಣ್ಯ ಕಾಯ್ದೆ ಮತ್ತು ನಿಯಮಗಳ ವಿಷಯದಲ್ಲಿ ನಾವು ಸುಪ್ರೀಂ ಕೋರ್ಟ್‌ನ ನಿಲುವು ಹಾಗೂ ಆದೇಶಗಳಿಗೆ ಸಂಪೂರ್ಣವಾಗಿ ಬದ್ಧರಾಗಿದ್ದೇವೆ. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಅಥವಾ ಮಾನವ ಜೀವಕ್ಕೆ ಹಾನಿಯಾಗಬಾರದು ಎಂಬುದು ನಮ್ಮ ಮುಖ್ಯ ಆದ್ಯತೆಯಾಗಿದೆ,” ಎಂದು ಸ್ಪಷ್ಟಪಡಿಸಿದರು.
ಪ್ರಸ್ತುತ ಇರುವ ನಿಯಮಗಳಲ್ಲಿ ಏನಾದರೂ ಲೋಪದೋಷಗಳಿದ್ದರೆ ಅಥವಾ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರೆ, ಅವುಗಳನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಜಿಲ್ಲಾಧಿಕಾರಿಗಳು ಜಾಗರೂಕರಾಗಿದ್ದು, ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿರ್ವಹಿಸುವಂತೆ ಸೂಕ್ತ ಸೂಚನೆ ನೀಡಲಾಗಿದೆ ಎಂದರು.
ಬೈಟ್ : ಮಧುಬಂಗಾರಪ್ಪ, ಶಿಕ್ಷಣ ಸಚಿವರು

