Home ಅಪರಾಧ ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಭೀಕರ ಹಲ್ಲೆ; ‘ಆಪಲ್ ರಘು’ ಬಂಧನ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಭೀಕರ ಹಲ್ಲೆ; ‘ಆಪಲ್ ರಘು’ ಬಂಧನ

by Mahesh malenaadu

​ಶಿವಮೊಗ್ಗ: ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ಅವುಕ ಸರ್ಕಲ್ ಬಳಿ ಭೀಕರ ಹಲ್ಲೆ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಮಂಜುನಾಥ್ ಎಂಬವರ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿ ರಾಘವೇಂದ್ರ ಅಲಿಯಾಸ್ ‘ಆಪಲ್ ರಘು’ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ.

​ದೌರ್ಜನ್ಯವೆಸಗಿದ ಆರೋಪಿಯು ಸಂತ್ರಸ್ತ ಮಂಜುನಾಥ್ ಅವರ ತಲೆಯ ಮೇಲೆ ಕಾಲಿಟ್ಟು ವಿಕೃತಿ ಮೆರೆದಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ನೇತೃತ್ವದ ತಂಡ, ಆರೋಪಿ ರಾಘವೇಂದ್ರನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.

Spread the love

You may also like

Leave a Comment