Home ರಾಜಕೀಯ ಖರ್ಗೆ ಸಭೆ ನಡೆಸಿದ ಸ್ಥಳ ಶುದ್ಧೀಕರಣ ಪ್ರಕರಣ, ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಖರ್ಗೆ ಸಭೆ ನಡೆಸಿದ ಸ್ಥಳ ಶುದ್ಧೀಕರಣ ಪ್ರಕರಣ, ಕಾಂಗ್ರೆಸ್ ಬೃಹತ್ ಪ್ರತಿಭಟನೆ

by Mahesh malenaadu

ಶಿವಮೊಗ್ಗ : ​ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಭೆಯ ಬಳಿಕ ಸ್ಥಳ ಶುದ್ಧೀಕರಣ ನಡೆಸಿದ ಘಟನೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

​ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಶಿವಪ್ಪನಾಯಕ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಸ್ಥಳ ಶುದ್ಧೀಕರಣದ ಮೂಲಕ ಖರ್ಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಪಮಾನ ಎಸಗಲಾಗಿದೆ ಎಂದು ಆರೋಪಿಸಿದ ಕೈ ಕಾರ್ಯಕರ್ತರು, ಘಟನೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

Spread the love

You may also like

Leave a Comment