46
ಶಿವಮೊಗ್ಗ : ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರವು ಕನಿಷ್ಠ ವೇತನ ಅಧಿಸೂಚನೆಯನ್ನು ತಕ್ಷಣ ಜಾರಿಗೊಳಿಸಬೇಕು, ಇಪಿಎಫ್-95 ಪಿಂಚಣಿಯನ್ನು ₹7,500ಕ್ಕೆ ಹೆಚ್ಚಿಸಬೇಕು ಮತ್ತು ಇಎಸ್ಐ ವ್ಯಾಪ್ತಿ ಮಿತಿಯನ್ನು ವಿಸ್ತರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಅಲ್ಲದೆ ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಕಾರ್ಯಕರ್ತರನ್ನು ಖಾಯಂಗೊಳಿಸಿ ಗೌರವಧನ ಹೆಚ್ಚಿಸಬೇಕು, ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ ಪದ್ಧತಿ ರದ್ದುಪಡಿಸಬೇಕು ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ 5 ದಿನಗಳ ಕೆಲಸದ ಪದ್ಧತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

