Home ಕ್ರೀಡೆ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ 5 ಜನ ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆ.

ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ 5 ಜನ ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆ.

by Mahesh malenaadu

ಶಿವಮೊಗ್ಗ: ನಗರದ ನೆಹರೂ ಇಂಡೋರ್ ಸ್ಟೇಡಿಯಂನಲ್ಲಿ ಆಗಸ್ಟ್ 17 ರಂದು ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ 5 ವಿಧ್ಯಾರ್ಥಿಗಳು ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರೋಷನ್, ಶಹಬಾಜ್, ಲಿಖಿತ್, ಮಾನ್ವಿ, ಶೀತಲ್ ಈ 5 ವಿಧ್ಯಾರ್ಥಿಗಳಿಗೆ, ಕರಾಟೆ 365 ಅಕಾಡೆಮಿಯ ಸಂಸ್ಥಾಪಕರಾದ ಸೆನ್ಸಿ ಮಂಜುನಾಥ್, ಸೆನ್ಸಿ ನವೀನ್, ಸೆನ್ಸಿ ಸಾದಿಕ್ , ಸಂಪೈ ಆಶಿಕ್,ಸಂಪೈ ದೀಕ್ಷಾ,ಸಂಪೈ ಮಧುಶ್ರೀ ಯವರು ವಿಜೇತರಾದ ವಿಧ್ಯಾರ್ಥಿಗಳಿಗೆ ಅಸೋಸಿಯೇಷನ್ ವತಿಯಿಂದ ಅಭಿನಂದಿಸಿದ್ದಾರೆ.

Spread the love

You may also like

Leave a Comment