Home ಅಪರಾಧ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖತರ್ನಾಕ್ ಬೈಕ್ ಕಳ್ಳ ಕೊನೆಗೂ ಭದ್ರಾವತಿ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖತರ್ನಾಕ್ ಬೈಕ್ ಕಳ್ಳ ಕೊನೆಗೂ ಭದ್ರಾವತಿ ಪೊಲೀಸರ ಬಲೆಗೆ

by Mahesh malenaadu

​ಶಿವಮೊಗ್ಗ: ಕಳೆದ 13 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಖತರ್ನಾಕ್ ಬೈಕ್ ಕಳ್ಳನನ್ನು ಭದ್ರಾವತಿ ನ್ಯೂ ಟೌನ್‌ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

​ಬಂಧಿತ ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಈತ 2010ರಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
​ಆರೋಪಿಯ ವಿರುದ್ಧ ಭದ್ರಾವತಿಯ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಹೊರಡಿಸಿದ್ದ ವಾರಂಟ್ ಆಧರಿಸಿ, ಭದ್ರಾವತಿ ನ್ಯೂ ಟೌನ್‌ ಪಿಎಸ್‌ಐ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಮಂಜುನಾಥ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Spread the love

You may also like

Leave a Comment