Home Uncategorized ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸಾವು

ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸಾವು

by Mahesh malenaadu

 

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಳಸಗೋಡುಬಳಿ ಬೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೆ ಮೃತ ಪಟ್ಟಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಮೃತ ಯುವಕನನ್ನು ಚಿಪ್ಳಿ ಗ್ರಾಮದ ಅರ್ಜುನ್ (19) ಎಂದು ಗುರುತಿಸಲಾಗಿದ್ದು, ಸಾಗರದಿಂದ ಆನಂದಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಬೈಕ್ ಸವಾರ ಅರ್ಜುನ್ ಹಾಗೂ
ಶಿವಮೊಗ್ಗ ಕಡೆಯಿಂದ ಸಾಗರದತ್ತ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು
ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅರ್ಜುನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದು ಸಾಗರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲು- ಪರಿಶೀಲನೆ ನಡೆಸಲಾಗುತ್ತಿದೆ.

Spread the love

You may also like

Leave a Comment