Home ಅಪರಾಧ ಕುಡಿದ ಮತ್ತಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ, ರಸ್ತೆ ಬದಿಯ ಕೆರೆಗೆ ಲಾರಿ ನುಗ್ಗಿಸಿದ ಚಾಲಕ.

ಕುಡಿದ ಮತ್ತಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ, ರಸ್ತೆ ಬದಿಯ ಕೆರೆಗೆ ಲಾರಿ ನುಗ್ಗಿಸಿದ ಚಾಲಕ.

by Mahesh malenaadu

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಗ್ರಾಮದಬಳಿ ಲಾರಿ ನೀರಿನಲ್ಲಿ ಮುಳುಗುತ್ತಿದ್ದಂತೆ ಸಮಯಪ್ರಜ್ಞೆ ಮೆರೆದ ಸ್ಥಳೀಯ ಗ್ರಾಮಸ್ಥರು ಸಾಹಸಪಟ್ಟು ಚಾಲಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿರುವ ಘಟನೆ ಉಳ್ಳೂರು ಗ್ರಾಮದ ಕೆರೆಯಬಳಿ ನಡೆದಿದೆ.

ಮದ್ಯ ಸೇವಿಸಿ ಸಂಪೂರ್ಣ ಅಮಲಿನಲ್ಲಿದ್ದ ಲಾರಿ ಚಾಲಕನೊಬ್ಬ ವಾಹನ ಚಲಾಯಿಸಿಕೊಂಡು ಉಳ್ಳುರು ಮಾರ್ಗವಾಗಿ ಹೋಗುವಾಗ ನಿಯಂತ್ರಣ ತಪ್ಪಿ ವಾಹನ ಕೆರೆಯಪಾಲಾಗಿದೆ.

ಅಪಘಾತದ ಶಬ್ದ ಕೇಳಿ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು
ಲಾರಿ ಕ್ಯಾಬಿನ್‌ನಲ್ಲಿ ಸಿಲುಕಿದ್ದ ಚಾಲಕನನ್ನು ರಕ್ಷಣೆ ಮಾಡಿದ್ದು
ಅದೃಷ್ಟವಶಾತ್ ಯಾವುದೇ ಗಂಭೀರ ಅಪಾಯವಾಗಿಲ್ಲ,

ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣಾ ಪೊಲೀಸರಿಂದ ಸ್ಥಳ ಪರಿಶೀಲನೆ ನಡೆಸಲಾಗುತ್ತಿದ್ದು,
ಸಾರ್ವಜನಿಕರ ಜೀವಕ್ಕೆ ಅಪಾಯ ತಂದ ಆರೋಪದ ಮೇಲೆ ದೂರು ದಾಖಲಿಸಿ, ಮದ್ಯದ ಅಮಲಿನಲ್ಲಿ ವಾಹನ ಚಾಲನೆ ಮಾಡಿದ ಹಿನ್ನೆಲೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದೂರು ದಾಖಲಾಗಿದೆ.

Spread the love

You may also like

Leave a Comment