10
ಶಿವಮೊಗ್ಗ: ಸಾಗರ ತಾಲೂಕಿನ ತುಮರಿ ಗ್ರಾ.ಪಂ. ವ್ಯಾಪ್ತಿಯ ಕಿರುವಾಸೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2, 3, 4 ನೇ ತರಗತಿಯ ಮೂವರು ವಿದ್ಯಾರ್ಥಿಗಳಿಗೆ ಕೋಲಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ ರಕ್ಷಿತಾ ಎಂಬ ಅತಿಥಿ ಶಿಕ್ಷಕಿಯಿಂದ ಕೋಲಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು
ಮಕ್ಕಳ ಬೆನ್ನಿನ ಮೇಲೆ ಬಾಸುಂಡೆ ಬಿದ್ದಿದೆ ಎಂದು ಪೋಷಕರ ಆರೋಪಿಸಿದ್ದಾರೆ ಘಟನೆ ಬಗ್ಗೆ ಗ್ರಾಮಸ್ಥರು ಹಾಗೂ ಪೋಷಕರ ಆಕ್ರೋಶ ವ್ಯಕ್ತ ಪಡಿಸಿದ್ದು
ಅತಿಥಿ ಶಿಕ್ಷಕಿ ರಕ್ಷಿತಾ ವಿರುದ್ಧ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಆಗ್ರಹ ವ್ಯಕ್ತವಾಗಿದೆ.

