ಶಿವಮೊಗ್ಗ: ಜೆಸಿಐ ಸಪ್ತಾಹದ ಅಂಗವಾಗಿ ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ನಗರದ ಪುನೀತ್ ರಾಜ್‌ಕುಮಾರ್ ಉದ್ಯಾನವನದಲ್ಲಿ ಶಿವಮೊಗ್ಗ ನಗರದ ಪೌರ ಕಾರ್ಮಿಕರಿಗೆ ಸ್ಟೀಲ್ ಬಾಟಲಿಗಳನ್ನು ವಿತರಿಸಲಾಯಿತು.
ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವಲ್ಲಿ ಪೌರ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿದಿನ ಸಾರ್ವಜನಿಕ ಸ್ಥಳಗಳು ಹಾಗೂ ರಸ್ತೆಗಳನ್ನು ಸ್ವಚ್ಛಗೊಳಿಸುವ ಮೂಲಕ ನಗರದ ಸ್ವಚ್ಛತೆ ಮತ್ತು ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಉಪಯುಕ್ತವಾಗುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಜೆಸಿಐ ಶಿವಮೊಗ್ಗ ರಾಯಲ್ಸ್ ಸದಸ್ಯರು, ಪ್ಲಾಸ್ಟಿಕ್ ಬಳಕೆ ಭೂಮಿಗೂ ಹಾಗೂ ಜೀವ ಸಂಕುಲಕ್ಕೂ ಅಪಾಯಕಾರಿ. ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿ ವಸ್ತುಗಳ ಬಳಕೆಗೆ ಆದ್ಯತೆ ನೀಡಬೇಕು. ಸಣ್ಣ ಸಣ್ಣ ಬದಲಾವಣೆಗಳ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬಹುದು ಎಂದು ತಿಳಿಸಿದರು.
ಪ್ಲಾಸ್ಟಿಕ್ ಬಾಟಲಿಗಳ ಬದಲಿಗೆ ಮರುಬಳಕೆ ಮಾಡಬಹುದಾದ ಸ್ಟೀಲ್ ಬಾಟಲಿಗಳ ಬಳಕೆಯನ್ನು ಉತ್ತೇಜಿಸುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಲಾಯಿತು. ಜೆಸಿಐ ಸಪ್ತಾಹದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಭಾಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚಿರಂಜೀವಿ ಬಾಬು,ದೇವಿಕ ಮಹದೇವ್,ಸಂದೇಶ್ ರವರನ್ನು ಸನ್ಮಾನಿಸಲಾಯಿತು
ಕಾರ್ಯಕ್ರಮದಲ್ಲಿ ಶ್ರೀ ಚಿರಂಜೀವಿ ಬಾಬು, ಗೌರೀಶ್ ಭಾರ್ಗವ್, ಆದರ್ಶ್, ಪ್ರಮೋದ್ ಶಾಸ್ತ್ರಿ, ಸುದರ್ಶನ್ ತಾಯಿಮನೆ, ಗಾನವಿ, ಶ್ವೇತಾ ಪ್ರಶಾಂತ್, ತೇಜಸ್ವಿನಿ, ಪೂರ್ಣಿಮಾ, ಹೇಮಲತಾ, ಪ್ರೀತಿ, ದೇವಿಕಾ ಮಹದೇವ, ಸಂದೇಶ್, ಮೋಹನ್, ಸ್ಮಿತಾ ಸೇರಿದಂತೆ ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ಸದಸ್ಯರು ಉಪಸ್ಥಿತರಿದ್ದರು.

