62
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ -ಕಲ್ಗಲ್ ಬಳಿಯ ಹಲಕೊಟ್ಟಿಗೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.
ದಾವಣಗೆರೆಯ ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ನೌಕರರು ಪ್ರವಾಸಕ್ಕಾಗಿ ಕೊಲ್ಲೂರಿಗೆ ತೆರಳಿದ್ದರು, ಸಿಗಂದೂರು ಕಡೆಗೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮೂರು–ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದ್ದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ, ಗಾಯಾಳುಗಳಿಗೆ ತುಮರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು. ಇನ್ನು ಸ್ಥಳಕ್ಕೆ ಕಾರ್ಗಲ್ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

