Home Uncategorized ಬರದ ನಡುವೆ ದಸರಾ ಬೇಡ: ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ನಿರಾಕರಿಸಲಿ

ಬರದ ನಡುವೆ ದಸರಾ ಬೇಡ: ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ನಿರಾಕರಿಸಲಿ

by Mahesh malenaadu

ಬರದ ನಡುವೆ ದಸರಾ ಬೇಡ: ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ನಿರಾಕರಿಸಲಿ- 46,324 ಕೋಟಿ ಬರ ಪರಿಹಾರಕ್ಕೆ ಪ್ರಧಾನಿಗೆ ಮನವಿ ಮಾಡಲಿ : ಕಲ್ಲೂರು ಮೇಘರಾಜ್

ಶಿವಮೊಗ್ಗ: ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶಾಂತವೇರಿ ಗೋಪಾಲ ಗೌಡ ಟ್ರಸ್ಟಿನ ಕಲ್ಲುರು ಮೇಘರಾಜ್ – ರಾಜ್ಯದ 217 ತಾಲ್ಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಇರುವ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ದಸರಾ ಉತ್ಸವ ಆಚರಿಸುವುದು ಸೂಕ್ತವಲ್ಲ. ಹೀಗಾಗಿ 2026ರ ದಸರಾ ಉತ್ಸವ ಉದ್ಘಾಟನೆಗೆ ನೀಡಿರುವ ಆಹ್ವಾನವನ್ನು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನೈತಿಕತೆಯ ಆಧಾರದ ಮೇಲೆ ನಿರಾಕರಿಸಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದ್ದಾರೆ. ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ 46,324 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಮೀಜಿ ಭೇಟಿಯಾಗಿ ಒತ್ತಾಯಿಸಬೇಕು ಎಂದಿದ್ದಾರೆ.

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಅಂತರ್‌ ಸಚಿವಾಲಯ ತಂಡ ರಾಜ್ಯಕ್ಕೆ ಭೇಟಿ ನೀಡಿದೆ. ಎನ್‌ಡಿಆರ್‌ಎಫ್‌ ಮಾನದಂಡದಡಿ 46,324 ಕೋಟಿ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ದಸರಾ ಉದ್ಘಾಟಿಸುವುದಕ್ಕಿಂತ ಬರ ಪರಿಹಾರಕ್ಕಾಗಿ ಕೇಂದ್ರದ ಮೇಲೆ ಒತ್ತಡ ತರುವುದು ಸೂಕ್ತ ಎಂದು ಹೇಳಿದ್ದಾರೆ. ರೈತರು, ಜನಸಾಮಾನ್ಯರು, ಜಾನುವಾರುಗಳು ಹಾಗೂ ಪಶು–ಪಕ್ಷಿಗಳು ಕುಡಿಯುವ ನೀರು ಮತ್ತು ಮೇವಿಗಾಗಿ ಪರದಾಡುತ್ತಿರುವಾಗ ಅದ್ಧೂರಿ ದಸರಾ ಆಚರಣೆ ನಡೆಸುವುದು ಸರಿಯಲ್ಲ. ಸರ್ಕಾರ ಬರ ಪರಿಸ್ಥಿತಿಗೆ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Spread the love

You may also like

Leave a Comment