Home Uncategorized ಆನಂದಪುರ ಬಳಿ ಬೆಳಗಿನಜಾವ ಹೊತ್ತಿ ಉರಿದ ಖಾಸಗಿ ಬಸ್

ಆನಂದಪುರ ಬಳಿ ಬೆಳಗಿನಜಾವ ಹೊತ್ತಿ ಉರಿದ ಖಾಸಗಿ ಬಸ್

by Mahesh malenaadu

ಆನಂದಪುರ ಬಳಿ ಬೆಳಗಿನಜಾವ ಹೊತ್ತಿ ಉರಿದ ಖಾಸಗಿ ಬಸ

ಆನಂದಪುರ: ಬೆಂಗಳೂರಿನಿಂದ ಸಾಗರದತ್ತ ಬರುತ್ತಿದ್ದ ಖಾಸಗಿ ಬಸ್‌ಗೆ ಮುಂಬಾಳು ಗ್ರಾಮದ ಬಳಿ ಗುರುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯ ಸಂಭವಿಸಿಲ್ಲ.

ಮುಂಬಾಳು ಗ್ರಾಮದ ಸಮೀಪ ಬೆಳಿಗ್ಗೆ ಸುಮಾರು 5.45ರ ವೇಳೆಗೆ ‘ ಡ್ರೀಮ್ ‘ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಹಾಗೂ ಸಿಬ್ಬಂದಿ ತಕ್ಷಣ ಎಚ್ಚೆತ್ತುಕೊಂಡಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಬಸ್‌ನಿಂದ ಕೆಳಗಿಳಿಸಿದ್ದಾರೆ.ಕೆಲವೇ ಕ್ಷಣಗಳಲ್ಲಿ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಬಸ್‌ನ ಬಹುಪಾಲು ಭಾಗ ಬೆಂಕಿಗಾಹುತಿಯಾಗಿದೆ. ಪರಿಣಾಮ ಬಸ್‌ನ ಸುಮಾರು ಶೇ.80ರಷ್ಟು ಭಾಗ ಸುಟ್ಟುಹೋಗಿದೆ ಎಂದು ತಿಳಿದುಬಂದಿದೆ.

ಬಸ್‌ನ ಒಳಭಾಗ ಸೇರಿದಂತೆ ಹಲವು ಭಾಗಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಘಟನೆಯಿಂದ ಭಾರಿ ಪ್ರಮಾಣದ ಆಸ್ತಿ ನಷ್ಟ ಸಂಭವಿಸಿದೆ.

ಘಟನೆಯ ಮಾಹಿತಿ ದೊರೆತ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸಕಾಲದಲ್ಲಿ ಅಗ್ನಿಶಾಮಕ ವಾಹನ ಸ್ಥಳಕ್ಕೆ ಆಗಮಿಸಿದ್ದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ನಿಯಂತ್ರಿಸಲು ಸಾಧ್ಯವಾಗಿದೆ.

ಬೆಳಗಿನ ಜಾವ ಹೆದ್ದಾರಿ ಸಮೀಪ ಬಸ್ ಹೊತ್ತಿ ಉರಿದ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಪ್ರಯಾಣಿಕರನ್ನು ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಕೆಳಗಿಳಿಸಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪ್ರಾಥಮಿಕ ಮಾಹಿತಿಯಂತೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಆನಂದಪುರ ಪೊಲೀಸರು ಘಟನೆಯ ಕುರಿತು ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Spread the love

You may also like

Leave a Comment