25
ಸಾಗರ: ಸಾಗರದ ಹೊಸಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೊಸಕೆರೆಯಲ್ಲಿ ನಡೆದಿದೆ. ಒಂದೇ ಕುಟುಂಬದ ಮೃತ ಯುವಕರಾದ ಲೇಖನ್(13) ಹಾಗೂ ಪುನೀತ್ (11) ಹೊಸಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮುಳುಕೇರಿ ಹಾಗೂ ಆಲಳ್ಳಿ ಗ್ರಾಮದ ಒಂದೇ ಕುಟುಂಬದ ಇಬ್ಬರು ಬಾಲಕರು ಸಾವನ್ನಪ್ಪಿದ್ದು ಎಳೆಯ ವಯಸ್ಸಿನ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ತರು ಕಣ್ಣೀರಿಡುತ್ತಿರುವ .ಮೃತ ದೇಹಗಳನ್ನು ಸಾಗರ ಉಪವಿಭಾಗೀಯ ಆಸ್ಪತ್ರೆ ಬಳಿ ತರಲಾಗಿದ್ದು ಆಸ್ಪತ್ರೆ ಬಳಿ ಕುಟುಂಬಸ್ತರ ಆಕ್ರಂದನ ಮುಗಿಲುಮುಟ್ಟಿದೆ.
ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟಿರುವ ದುರಂತ ಸಾವಿಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

